ಬೆಂಗಳೂರು: ಕನ್ನಡ ರಾಜ್ಯೋತ್ಸವ 2020 ಪ್ರಶಸ್ತಿ ಪ್ರಕಟಗೊಂಡಿದೆ. ವಿಧಾನ ಸೌಧದಲ್ಲಿಂದು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಬಿಡುಗಡೆ ಮಾಡಿದರು.

Advertisement

ಕೋವಿಡ್ ಕಾರಣದಿಂದ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಕೂಡ ಸರಳವಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಮಾಹಿತಿ ನೀಡಿದೆ.

ಈ ಬಾರಿಗೆ 65 ನೇ ಕನ್ನಡ ರಾಜ್ಯೋತ್ಸವ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ 65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಈ ಸಮಾರಂಭವನ್ನು ನವೆಂಬರ್ 7 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಹಾಗೆಯೇ ಪ್ರಶಸ್ತಿ 1 ಲಕ್ಷ ರೂ. ಗಳು ಮತ್ತು 25 ಗ್ರಾಂ ಚಿನ್ನ ಹೊಂದಿರಲಿದೆ ಎಂದು ಈ ಬಗ್ಗೆ ಮೂಲಗಳು ತಿಳಿಸಿದೆ.

ಹಾಗೂ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುವುದಾಗಿಯೂ ಸರ್ಕಾರ ತಿಳಿಸಿದೆ.

Advertisement
web