ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ಭೀಕರ ಅಪಘಾತ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವದಂಪತಿಗಳು ಮೃತಪಟ್ಟಿದ್ದಾರೆ.

Advertisement

ಬೈಕಿನಲ್ಲಿದ್ದ ಮೃತರನ್ನು ಬಜಾಲ್ ನಿವಾಸಿ ರಯಾನ್ ಫರ್ನಾಂಡಿಸ್ ಮತ್ತು ಪ್ರಿಯಾ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ.

ಈ ದಂಪತಿಗಳು ಉಳ್ಳಾಲ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಕೆಲಸದಲ್ಲಿದ್ದರು.

ದಂಪತಿಗಳು ಹೋಗುತ್ತಿದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭದಲ್ಲಿ ಅತಿ ರಭಸದಿಂದ ಬಂದ ಲಾರಿ ಡಿಕ್ಕಿಯಾಗಿದ್ದ ಪರಿಣಾಮ ಪ್ರಿಯಾ ರವರು ಸ್ಥಳದಲ್ಲೇ ಮೃತಪಟ್ಟರು. ರಯಾನ್ ರವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು.

ಹಾಗೆಯೇ ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
web