ತುಳು ಚಿತ್ರನಟ ಸುರೇಂದ್ರ ಬಂಟ್ವಾಳರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ ರೋಡಿನಲ್ಲಿರುವ ತಮ್ಮ ಫ್ಲ್ಯಾಟ್ನಲ್ಲೇ ಹತ್ಯೆ ಮಾಡಲಾಗಿರುವುದು ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ
ಪ್ರಸಿದ್ಧ ತುಳು ಚಲನಚಿತ್ರ ಚಾಲಿಪೋಲಿಲು ಸೇರಿ ಹಲವಾರು ಸಿನೆಮಾಗಳಲ್ಲಿ ಸುರೇಂದ್ರ ಬಂಟ್ವಾಳ್ ನಟಿಸಿದ್ದಾರೆ
ಸುರೇಂದ್ರ ಬಂಟ್ವಾಳ್ ಅವರ ಜೊತೆಗೆ ಇದ್ದವರಿಂದಲೇ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ
ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಂಟ್ವಾಳ್, ಬಂಟ್ವಾಳದಲ್ಲಿ ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು
2018 ರ ಜೂನ್ ತಿಂಗಳಲ್ಲಿ ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆಗಿತ್ತು, ಪ್ರಖರಣವೊಂದರಲ್ಲಿ ಜೈಲು ಸೇರಿದ್ದ ಬಂಟ್ವಾಳ್ ಜಾಮೀನಿನ ಮೇಲೆ ಹೊರ ಬಂದಿದ್ದರು. ಸುರೇಂದ್ರರನ್ನು ಯಾರು ಯಾವ ಕಾರಣಕ್ಕೆ ಹತ್ಯೆಗೈದರು ಎನ್ನುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಿದೆ

Advertisement
Advertisement
web