ಅ.23:ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಒಕ್ಟೋಬರ್ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿತು.ಸುಮಾರು 115 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ, 250 ಬೆಡ್, ಆಸ್ಪತ್ರೆಗೆ ಬೇಕಾದಷ್ಟು ಸಿಬ್ಬಂದಿ, ಪೀಠೋಪಕರಣ ಗಳು ಸೇರಿದಂತಹ ಯೋಜನೆ ಇದಾಗಿದೆ.ಉಡುಪಿ ಜನತೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿ ಯವರಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಬಿ. ರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಸುಧಾಕರ್, ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಕ್ಷೇತ್ರದ ಶಾಸಕರಾದ ರಘುಪತಿ ಭಟ್  ಸಮಸ್ತ ಜನತೆಯ ಪರವಾಗಿ ವಿಶೇಷ ಅಭಿನಂದನೆ ಸಲ್ಲಿಸಿದರು.

Advertisement

ಕರಾವಳಿ ಯೂತ್ ಕ್ಲಬ್ ಉಡುಪಿ ಹಾಗೂ ಇತರ ಸಂಘ ಸಂಸ್ಥೆಗಳ ಹೋರಾಟದ ಫಲ:ಉಡುಪಿ ಜಿಲ್ಲಾಸ್ಪತ್ರೆಗೆ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ವಾಸ್ತವ್ಯ ಹೂಡಲು ಬಂದಿದ್ದ ಅಂದಿನ ಆರೋಗ್ಯ ಸಚಿವ ಶ್ರೀ ರಾಮುಲುರವರಿಗೆ ಖುದ್ದಾಗಿ KYC ವತಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಹಾಗೂ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು.ಈ ಸಂದರ್ಭದಲ್ಲಿ ನಮ್ಮ  ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಇದರ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದರು.ಸತತ ಹೋರಾಟಗಳ ಫಲವಾಗಿ ಇದೀಗ ಆಸ್ಪತ್ರೆಗೆ ಅನುಮೋದನೆ ಅಭಿಸಿದ್ದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ.

 

 

 

 

Advertisement
web