ನವದೆಹಲಿ  : ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 75 ರೂ ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರಮೋದಿ ಸರಕಾರವು ಕನಿಷ್ಠ ಬೆಂಬಲ ಬೆಲೆಗೆ ಬೆಳೆಗಳನ್ನು ಖರೀದಿಸಲು ಬದ್ಧವಾಗಿದೆ,ಇದು ದೇಶದ ಆಹಾರ ಭದ್ರತೆಯ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟರು.ಆಹಾರ ಮತ್ತು ಕೃಷಿ ಸಂಸ್ಥೆಯ ಸ್ಮರಣಾರ್ಥ ಬಿಡುಗಡೆ ಮಾಡಿದ ನಾಣ್ಯ ಸಾಮಾನ್ಯ ಬಳಕೆಗೆ ಅವಕಾಶವಿಲ್ಲ.ಆನ್ಲೈನ್ ಮೂಲಕ ಬಳಕೆ ಮಾಡಬಹುದಾಗಿದೆ.ಈ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮದುವೆಯ ಕನಿಷ್ಟ ವಯಸ್ಸಿನ ನಿಗದಿಗೆ ಅಧ್ಯಯನ ನಡೆಸಲು ಸಮಿತಿಯನ್ನು ರಚಿಸಲಾಗುವುದು.ಸಮಿತಿಯ ಶಿಫಾರಸ್ಸಿನ ಮೇರೆಗೆ ಸರಕಾರ ನಿರ್ಣಯ ತೆಗೆದುಕೊಳ್ಳುವುದು ಎಂದು ಹೇಳಿದರು.

Advertisement
Advertisement
web